ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಳೆದ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿಗಳನ್ನು ಡಿಸೆಂಬರ್ 12 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ನಲ್ಲಿ ಸಲ್ಲಿಸಬಹುದು.
ವಿದ್ಯಾರ್ಥಿಗಳ ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿಗಳನ್ನು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧ ಪೋರ್ಟಲ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ www.dbcdc.karnataka.gov.in ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.