ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇರುವಂತ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ( Police Constable Recruitment 2022 ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಯಲ್ಲಿದ್ದಂತ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಅದೇ ಅರ್ಜಿ ಸಲ್ಲಿಸಲು ನಿಗದಿ ಪಡಿಸಲಾಗಿದ್ದಂತ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿದೆ. ಅಲ್ಲದೇ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ.@CMofKarnataka@DgpKarnataka pic.twitter.com/5X3JudW44K
— Araga Jnanendra (@JnanendraAraga) November 3, 2022
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಅವರು, ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
ಅಂದಹಾಗೇ ರಾಜ್ಯ ಸರ್ಕಾರದಿಂದ ( Karnataka Government ) ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ( Karnataka Police Constable Recruitment ) ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ.
ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, ಪೊಲೀಸ್ ಕಾನ್ಸ್ ಟೇಬಲ್ ( Police Constable ) (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡುವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಇಗೆ ಅಗತ್ಯ ತಿದ್ದುಪಡಿ ಮಾಡವು ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ