ಪಾಕಿಸ್ತಾನ: ಗುರುವಾರ ಮಧ್ಯಾಹ್ನ ಪಾಕಿಸ್ತಾನದ ಪಂಜಾಬ್ನ ವಜೀರಾಬಾದ್ನಲ್ಲಿ ನಡೆದ ರ್ಯಾಲಿ ಮೇಲಿನ ಗುಂಡಿನ ದಾಳಿಯಲ್ಲಿ ಗಾಯಗೊಂಡ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಲಾಹೋರ್ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ, ಘಟನೆ ವೇಳೆ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಗುಂಡಿನ ದಾಳಿಯಲ್ಲಿ ಇಮ್ರಾನ್ ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ. ವಜೀರಾಬಾದ್ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ, ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವ್ರ ಬಲಗಾಲಿನಲ್ಲಿ ಬ್ಯಾಂಡೇಜ್ ಹಾಕಲಾಗಿದೆ. ಅಂದ್ಹಾಗೆ, ಗುರುವಾರ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪ್ರತಿಭಟನಾ ಮೆರವಣಿಗೆಯ ಏಳನೇ ದಿನವಾಗಿದೆ.
Imran Khan was shot in the leg but was stable while being taken to hospital. He waived at supporters too. #عمران_خان_ہماری_ریڈ_لائن_ہے pic.twitter.com/XizoAQzPax
— PTI (@PTIofficial) November 3, 2022
Injured in the assassination attempt on Imran Khan, Senator @FaisalJavedKhan speaks exclusively. #عمران_خان_ہماری_ریڈ_لائن_ہے pic.twitter.com/PyrgQoeTs7
— PTI (@PTIofficial) November 3, 2022