ಇಸ್ರೇಲ್: ಇಸ್ರೇಲ್ನ ಪ್ರಧಾನ ಮಂತ್ರಿಯಾಗಿ ಬೆಂಜಮಿನ್ ನೆತನ್ಯಾಹು (Benjamin Netanyahu) ಮತ್ತೆ ಆಯ್ಕೆಯಾಗಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಯೇರ್ ಲ್ಯಾಪಿಡ್ ಅವರನ್ನು ಬೆಂಜಮಿನ್ ನೆತನ್ಯಾಹು ಸೋಲಿಸುವ ಮೂಲಕ ಮತ್ತೆ ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ, ಸೋಲನ್ನು ಒಪ್ಪಿಕೊಂಡಿರುವ ಜೈರ್ ಲ್ಯಾಪಿಡ್ ಅವರು ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ. ವ್ಯವಸ್ಥಿತವಾಗಿ ಅಧಿಕಾರ ಹಸ್ತಾಂತರಕ್ಕೆ ಸಿದ್ಧತೆ ನಡೆಸುವಂತೆ ಲ್ಯಾಪಿಡ್ ಎಲ್ಲ ಇಲಾಖೆಗಳಿಗೂ ಸೂಚಿಸಿದ್ದಾರೆ.
ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಮತಗಳ ಮತಗಳ ಎಣಿಕೆ ಕಾರ್ಯ ನಿನ್ನೆ ಮುಕ್ತಾಯಗೊಂಡಿದ್ದು, 120 ಸದಸ್ಯ ಬಲದ ಸಂಸತ್ತಿನಲ್ಲಿ ನೆತನ್ಯಾಹು ನೇತೃತ್ವದ ಬಲಪಂಥೀಯ ಬಣ 64 ಸ್ಥಾನಗಳನ್ನು ಗೆದ್ದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಕ್ಕೆ ಸಿದ್ಧತೆ ನಡೆಸುವಂತೆ ಪ್ರಧಾನಿ ಕಾರ್ಯಾಲಯದ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿರುವುದಾಗಿ ಲ್ಯಾಪಿಡ್ ನೆತನ್ಯಾಹುಗೆ ತಿಳಿಸಿದ್ದಾರೆ. ನೆತನ್ಯಾಹು ಅವರ ಗೆಲುವಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
BIGG NEWS : `APL-BPL’ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!
BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ!
BIGG NEWS : `APL-BPL’ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!