ದಾವಣಗೆರೆ : ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್ ತಂದೆ ರಮೇಶ್ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BIGG NEWS : ರಾಜ್ಯದಲ್ಲೂ ಸಂಚರಿಸಲಿದೆ `ವಂದೇ ಭಾರತ್ ಎಕ್ಸ್ ಪ್ರೆಸ್ : ನ.11 ಕ್ಕೆ ಪ್ರಧಾನಿ ಮೋದಿ ಚಾಲನೆ
ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ಚಂದ್ರಶೇಖರ್ ತಂದೆ ರಮೇಶ್, ಚಂದ್ರುಮೃತದೇಹ ಕಾರಿನ ಹಿಂದಿನ ಸೀಟ್ ನಲ್ಲಿತ್ತು. ಅಷ್ಟೇ ಅಲ್ಲದೇ ಚಂದ್ರಶೇಖರ್ ಕೈಕಾಲುಗಳನ್ನು ಕಟ್ಟಿ ಹಾಕಿದ್ದರು. ನಂತರ ಕಿವಿ. ತಲೆಗೆ ಆಯುಧದಿಂದ ಹಲ್ಲೆ ಸಹ ಮಾಡಲಾಗಿತ್ತು. ಬಳಿಕ ಮೃತದೇಹ ಕಾರಿನಲ್ಲಿಟ್ಟು ತುಂಗಾ ಕಾಲುವೆಗೆ ದೂಡಿದ್ದಾರೆ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಮೃತ ದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಚಂದ್ರಶೇಖರ್ ಅವರ ಶವವು ಕಾರಿನ ಹಿಂಬದಿ ಸೀಟಿನಲ್ಲಿ ಪತ್ತೆಯಾಗಿದೆ. ಮೊಬೈಲ್ ಸಹ ಕಾರಿನಲ್ಲಿಯೇ ಸಿಕ್ಕಿದೆ. 14 ಕಿಲೋಮೀಟರ್ ದೂರವನ್ನು ಚಂದ್ರಶೇಖರ್ ಕೇವಲ ಎಂಟು ನಿಮಿಷಗಳಲ್ಲಿ ಕ್ರಮಿಸಿರುವ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
BIGG NEWS : ನವೆಂಬರ್ 6ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ