ಬೆಳಗಾವಿ: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನಗೆ ಬೇರೆ ಬೇರೆ ನಂಬರ್ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ… ಮಗನೇ ಎಂದು ಹೀನಾಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ನನಗೆ ಸುಮಾರು 4-5 ಸಲ ಬೆದರಿಕೆ ಕರೆಗಳು ಬಂದಿವೆ. ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ.