ಬೆಂಗಳೂರಿನಲ್ಲಿ : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ನಿನ್ನೆ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಲಕ್ಷಾಂತರ ರೂ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ 14 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬೆಂಗಳೂರು ವ್ಯಾಪ್ತಿಯ ನಾಗರವಾರ, ಬಾಣಸವಾಡಿ, ಕೊರ ಮಂಗಲ, ವರ್ತೂರು, ಬೇಗೂರು ಸೇರಿ 14 ಕಡೆ ದಾಳಿ ನಡೆದಿತ್ತು. ಒಟ್ಟು 14 ಕಡೆ ದಾಳಿ ನಡೆಸಿದ ವೇಳೆ 7.5 ಲಕ್ಷ ರೂ ಹಣ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 2,64,920 ರೂ. ಹಣ , ಆನೆಕಲ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 95,170 ರೂ., ಹೊಸಕೋಟೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 1,04,230 ರೂ., ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 42,170 ರೂ., ಬನ್ನೇರುಘಟ್ಟ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 23,350 ರೂ. ಪತ್ತೆಯಾಗಿತ್ತು.
ಈ ಹಿನ್ನೆಲೆ ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಲಕ್ಷಾಂತರ ರೂ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ 14 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ವರ್ತೂರು, ಬೇಗೂರು, ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೂ ದಾಳಿ ಮಾಡಿದ್ದು, ಲೋಕಾಯುಕ್ತ ಪೊಲೀಸರಿಂದ ಮಹತ್ವದ ದಾಖಲೆಗಳ ಸಂಗ್ರಹ ಮಾಡಲಾಗಿದೆ. ನೆಲಮಂಗಲದಲ್ಲೂ ಸಬ್ ರಿಜಿಸ್ಟರ್ ಕಛೇರಿ ಮೇಲೂ ಡಿವೈ ಎಸ್ಪಿ ಟಿ. ಸಿ. ವೆಂಕಟೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು,. ಒಟ್ಟು 8 ಜನ ಸಿಬ್ಬಂದಿಯಿಂದ ಕಛೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿತ್ತು.
BIGG NEWS: ಕಂದೂರಿನಲ್ಲಿ ಚಂದ್ರಶೇಖರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ; ಅಂತಿಮ ದರ್ಶನಕ್ಕೆ ಅವಕಾಶ
BIGG NEWS: ತಮಿಳುನಾಡಿನ ಮನೆಯೊಂದರಲ್ಲಿ ಫ್ರಿಡ್ಜ್ ಸ್ಫೋಟ : ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ| Fridge blast