ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ( Money laundering case ) ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ( Karnataka Pradesh Congress Committee president DK Shivakumar ) ಈಗ ಮತ್ತೆ ಬಂಧನದ ಭೀತಿ ಶುರುವಾಗಿದೆ. ಹೀಗಾಗಿಯೇ ರಕ್ಷಣೆ ಕೋರಿ ಅವರು ದೆಹಲಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಇಂದು ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದಂತ ದೆಹಲಿ ಹೈಕೋರ್ಟ್ ನ್ಯಾಯಪೀಠವು ಇಡಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ.
ಅಂದಹಾಗೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂದ ಡಿಕೆ ಶಿವಕುಮಾರ್ ವಿರುದ್ಧ ಇಡಿ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದಲ್ಲಿ ಬಂಧನದ ಭೀತಿಯನ್ನು ಅವರು ಎದುರಿಸುತ್ತಿದ್ದರು. ಹೀಗಾಗಿಯೇ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
BIGG NEWS ; ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಮೂರು ಕಂತುಗಳಲ್ಲಿ ಬಾಕಿ ಪಾವತಿ |7th Pay Commission