ಬೆಂಗಳೂರು: ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ( Karnataka SSLC Main Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಗೆ ನೊಂದಣಿ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಹಾಜರಾಗ ಬಯಸುವ ಖಾಸಗಿ ಅಭ್ಯರ್ಥಿಗಳು ಮತ್ತು ಎಲ್ಲಾ ವಿವಿಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಅವಧಿಯನ್ನು ದಿನಾಂಕ 10-11-2022ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.