ಬೆಂಗಳೂರು: ಒಂದೆಡೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್ ಇಡಿಗೆ ನೋಟಿಸ್ ಜಾರಿ ಮಾಡಿತ್ತು. ಈ ಬೆನ್ನಲ್ಲೇ ಇಂದು ಇಡಿ ಅಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ಸಂಕಷ್ಟ ಮುಂದುವರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕಕ್ಕೆ ಆಗಮಿಸುತ್ತಿರೋ ನವೆಂಬರ್ 7ರಂದೇ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಇಂದು ಬೆಳಿಗ್ಗೆ ಡಿಕೆ ಶಿವಕುಮಾರ್ ಗೆ ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೀಗಾಗಿ ಖರ್ಗೆ ಸನ್ಮಾನ ಕಾರ್ಯಕ್ರಮಕ್ಕೆ ಡಿಕೆಶಿ ಅವರು ಭಾಗವಹಿಸೋದು ಡೌಟ್ ಆಗಿದೆ.