ಬೆಂಗಳೂರು : ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಸದಸ್ಯರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿ ಸನ್ಮಾನ ಮಾಡಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆ 17 ನೂತನ ಪಾಲಿಕೆ ಸದಸ್ಯರು ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಈ ಕುರಿತು ಬಿಜೆಪಿ ಟ್ವೀಟ್ ನಲ್ಲಿ ಸಂತಸ ಹಂಚಿಕೊಂಡಿದೆ.
ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಭಾರತೀಯ ಜನತಾ ಪಾರ್ಟಿಯ 17 ನೂತನ ಪಾಲಿಕೆ ಸದಸ್ಯರು ಹಾಗೂ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.@BJP4Karnataka pic.twitter.com/cnczvCQNRh
— Basavaraj S Bommai (@BSBommai) November 4, 2022
BIGG NEWS : ‘ವೀರಶೈವ ಲಿಂಗಾಯತ’ ಸಂಪ್ರದಾಯದಂತೆ ಅಂತ್ಯಕ್ರಿಯೆ : ಮಣ್ಣಲ್ಲಿ ಮಣ್ಣಾದ ‘ಹೊನ್ನಾಳಿ ಚಂದ್ರಶೇಖರ್’