ತುಮಕೂರು: ನಗರದ ಪಟ್ಟಣದ ಕೆಆರ್ ಎಸ್ ಆಗ್ರಹಾರದಲ್ಲಿ ಮನೆ ಬಿಟ್ಟು ಹೋಗದ ಅತ್ತೆಯ ಮೇಲೆ ಸೊಸೆ ಕಬ್ಬಿಣ ಪೈಪ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ.
BIGG NEWS: ಇಂದು ಯುಜಿಸಿ- ನೆಟ್ ಫಲಿತಾಂಶ ಪ್ರಕಟ; ಇಲ್ಲಿದೆ ವೆಬ್ ಸೈಟ್ ವಿವರ| UGC NET Result
65 ವರ್ಷದ ಚಿಕ್ಕತಾಯಮ್ಮ ಹಲ್ಲೆಗೊಳಾಗದ ಅತ್ತೆ. ಚಿಕ್ಕತಾಯಮ್ಮ ಅವರಿಗೆ ಶಿವಕುಮಾರ್ ಹಾಗೂ ಎನ್.ಶಂಕರ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಶಿವಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದರೆ, ಇನ್ನೊಬ್ಬ ಮಗ ಎನ್.ಶಂಕರ್ ಜೊತೆ ಚಿಕ್ಕತಾಯಮ್ಮ ಕೆ.ಆರ್.ಎಸ್ ಆಗ್ರಹಾರದ ರೇವಣ್ಣ ಎಂಬವರ ಮನೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿರುತ್ತಾರೆ. ಶಂಕರ್ ಅವರು ಸೌಮ್ಯಳೊಂದಿಗೆ ಮದುವೆಯಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
BIGG NEWS: ಇಂದು ಯುಜಿಸಿ- ನೆಟ್ ಫಲಿತಾಂಶ ಪ್ರಕಟ; ಇಲ್ಲಿದೆ ವೆಬ್ ಸೈಟ್ ವಿವರ| UGC NET Result
ಬೆಂಗಳೂರಿನಲ್ಲಿ ಇರುವ ಶಿವಕುಮಾರ್ ಅವರ ಮನೆಗೆ ಹೋಗು ಎಂದು ಸೊಸೆ ಸೌಮ್ಯ, ತನ್ನ ಅತ್ತೆ ಚಿಕ್ಕತಾಯಮ್ಮನಿಗೆ ಒತ್ತಾಯ ಮಾಡುತ್ತಾ ಪದೇ, ಪದೇ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು. ಈ ಸಂಬಂಧ ಹಲವು ಬಾರಿ ಸೌಮ್ಯಳಿಗೆ ಮನೆಯ ಅಕ್ಕಪಕ್ಕದವರು ಬುದ್ದಿವಾದ ಹೇಳಿದರು. ಹೀಗಿದ್ದರೂ ನವೆಂಬರ್ 4ರಂದು ಶುಕ್ರವಾರ ಬೆಳಗ್ಗೆ 9-30 ಗಂಟೆ ಸಮಯದಲ್ಲಿ ಚಿಕ್ಕತಾಯಮ್ಮ ಅವರ ಮನೆಯಲ್ಲಿ ಏನೋ ಗಲಾಟೆ ನಡೆಯುತ್ತಿರುವ ಶಬ್ದ ಕೇಳಿ ಬಂದಿದೆ. ಅಷ್ಟರಲ್ಲಿ ಶಂಕರ್ ಅವರ ಮಕ್ಕಳಾದ ಗೌತಮಿ ಮತ್ತು ಸಹನಾ ಮನೆಯಿಂದ ಹೊರಗಡೆ ಬಂದು ನಮ್ಮ ಅಮ್ಮ ಅಜ್ಜಿಗೆ ಹೊಡೆಯುತ್ತಿದ್ದಾರೆ ಎಂದು ಅಳುತ್ತಿದ್ದರು.