ಬೀದರ್ : ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಬೇಮಳಖೇಡಾ ಗ್ರಾಮದಲ್ಲಿ ಜೀಪ್ ಮತ್ತು ಆಟೋ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಭೀಕರ ಅಪಘಾತದಲ್ಲಿಕ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
BIGG NEWS : ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಇಳಿಕೆ!
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಬೀದರ್ ಜಿಲ್ಲೆ ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಬಳಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಈ ಕುರಿತು ಬೀದರ ಜಿಲ್ಲಾಡಳಿತದೊಂದಿಗೆ ಮಾತನಾಡಿ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಬೀದರ್ ಜಿಲ್ಲೆ ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಬಳಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಈ ಕುರಿತು ಬೀದರ ಜಿಲ್ಲಾಡಳಿತದೊಂದಿಗೆ ಮಾತನಾಡಿ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ.
ಓಂ ಶಾಂತಿಃ— Basavaraj S Bommai (@BSBommai) November 5, 2022
ಚಿಟಗುಪ್ಪ ತಾಲೂಕಿನ ಉಡಮನಹಳ್ಳಿ ಗ್ರಾಮದ ಪ್ರಭಾವತಿ ದೇವಂದ್ರ (36), ಯಾದಮ್ಮ ಅಮೃತ (40), ಗುಂಡಮ್ಮ ನರಸಿಂಗ (60), ಜಗಮ್ಮ ಪ್ರಭು (34), ರುಕ್ಮಿಣಿ ಅಮೃತ (60) ನಿನ್ನೆ ರಾತ್ರಿ ಮೃತಪಟ್ಟಿದ್ದರು. ಇಂದು ಬೆಳಗ್ಗೆ ಮತ್ತೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಮೃತರೆಲ್ಲರೂ ಬಡ ಕೂಲಿಕಾರ್ಮಿಕರಾಗಿದ್ದು, ನೆರೆಯ ತೆಲಂಗಾಣ ಗ್ರಾಮದ ಹೊಲದಲ್ಲಿ ಸೋಯಾರಾಶಿ ಮಾಡಿ ಹಿಂತಿರುಗಿ ಬರುತ್ತಿರುವ ಸಮಯದಲ್ಲಿ ಅಪಘಾತ ಸಂಭವಿಸಿದೆ.