ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ರೇಣುಕಾಚಾರ್ಯ ಅವರು ವಾಟ್ಸಪ್ ಗ್ರೂಪ್ ನಲ್ಲಿ ಕೆಲವು ವಿಡಿಯೋಗಳನ್ನು ಶೇರ್ ಮಾಡಿದ್ದು, ಚಂದ್ರಶೇಖರ್ ಅಪಘಾತದಿಂದ ಸಾವು ಸಂಭವಿಸಿಲ್ಲ. ಇದು ಕೊಲೆ, ಕೊಲೆ ಮಾಡಿ ಶವ ತಂದು ಇಲ್ಲಿ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮುಂದುವರೆದು, ಪೊಲೀಸರು ಪ್ರಕರಣದ ಬಗ್ಗೆ ಸರಿಯಾದ ತನಿಖೆ ಮಾಡಿಲ್ಲ, ನಮ್ಮ ಕಾರ್ಯಕರ್ತರೇ ಚಂದ್ರು ಶವ ಪತ್ತೆ ಹಚ್ಚಿದ್ದಾರೆ. ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಎಡಿಜಿಪಿ ಅಲೋಕ್ ಕುಮಾರ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ. ತನಿಖೆ ಮಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸರಿಯಾದ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ಬೋಗಸ್ ತನಿಖೆ ಮಾಡಿದ್ದಾರೆ ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಉತ್ತಮ ತನಿಖೆ ಆಗುತ್ತದೆ?. ಚಂದ್ರ ಕಾರು ಓವರ್ ಸ್ಪೀಡ್ ಆಂತಾ ಹೇಳುತ್ತಿದ್ದಾರೆ. ಅದರೆ ಇದು ಕೊಲೆ. ಕೆಲವು ಫೋಟೋ ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.
ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮನ ಮಗ ಸಾವು ಪ್ರಕರಣ ಹಿನ್ನೆಲೆ ಚಂದ್ರಶೇಖರ್ ತಂದೆ ರಮೇಶ್ ದೂರಿನ ಮೇರೆಗೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302,201 ಹಾಗೂ 427 ರಡಿ ಪ್ರಕರಣ ದಾಖಲಾಗಿದ್ದು, ಮೃತ ದೇಹದ ಕೈ ಕಾಲುಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ದೂರಿನಲ್ಲಿ ಏನೇನಿದೆ..?
ಮೃತ ದೇಹದ ಕೈ ಕಾಲು ಬಟ್ಟೆಯಿಂದ ಕಟ್ಟಿ ಹಾಕಿದ್ದು, ಕಿವಿಗಳಿಗೆ ಹೊಡೆದಿರುವ ಗುರುತುಗಳು ಪತ್ತೆಯಾಗಿದೆ. ತಲೆಗೆ ಆಯುಧಗಳಿಂದ ಹೊಡೆದಿರುವ ಹಾಗೆ , ದೇಹದ ಉಳಿದ ಭಾಗದಲ್ಲಿ ಹೊಡೆದಿರುವ ಬಗ್ಗೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ. ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಅಪಘಾತದ ರೀತಿಯಲ್ಲಿ ಬಿಂಬಿಸಲಾಗಿದೆ. ಮೃತದೇಹವನ್ನು ಕಾರಿನಲ್ಲಿ ಇರಿಸಿ ಕಾರು ಜಖಂಗೊಳಿಸಿದ್ದಾರೆ ಎಂದು ರಮೇಶ್ ಎಫ್ ಐ ಆರ್ ದಾಖಲಿಸಿದ್ದಾರೆ.
ವೇತನ ಸಮಸ್ಯೆಗೆ ಬೇಸತ್ತು ಕೋಲಾರದಲ್ಲಿ’108 Ambulance’ ಚಾಲಕ ಆತ್ಮಹತ್ಯೆಗೆ ಯತ್ನ