ಬೆಂಗಳೂರು : ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಮಾಜಿ ಶಾಸಕ ಯುಟಿ ಖಾದರ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ದೈವ ನರ್ತಕರ ಪವಿತ್ರ ಆಚರಣೆಯನ್ನು ಗೌರವಿಸುವಂತೆ ಹೇಳಿದ್ದಾರೆ.
“ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ” ಎಂದಿದ್ದಾರೆ.
”ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು” ಎಂದು ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು.(2)
— UT Khadér (@utkhader) November 5, 2022
ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. (1)
— UT Khadér (@utkhader) November 5, 2022
BIGG UPDATE : ಪೋಕ್ಸೋ ಕೇಸ್ : ‘ಪುರುಷತ್ವ ಪರೀಕ್ಷೆ’ಯಲ್ಲಿ ಮುರುಘಾ ಶ್ರೀಗಳು ಪಾಸ್ ; ಲೈಂಗಿಕವಾಗಿ ಸಮರ್ಥರು..!