ಗುಜರಾತ್ : ಗುಜರಾತ್ ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿತ್ತಿದ್ದಾರೆ. ಈ ವೇಳೆ ವಲ್ಸಾದ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಭಾವನಗರ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಮಧ್ಯಾಹ್ನ ವಲ್ಸಾದ್ ಜಿಲ್ಲೆಯ ನಾನಾ ಪೊಂಡಾದಲ್ಲಿ ಪ್ರಧಾನಿ ಮೋದಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ಭಾವನಗರದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ತಂದೆ ಇಲ್ಲದ 522 ಹೆಣ್ಣು ಮಕ್ಕಳು ವಿವಾಹವಾಗಲಿದ್ದಾರೆ.
ಚುನಾವಣಾ ಆಯೋಗವು ಗುರುವಾರ ಗುಜರಾತಿನ 182 ವಿಧಾನಸಭಾ ಕ್ಷೇತ್ರಗಳಿಗೆ ವೇಳಾಪಟ್ಟಿಯನ್ನು ಘೋಷಿಸಿದೆ. ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 8 ರಂದು ನಡೆಯಲಿದ್ದು, ಹಿಮಾಚಲ ಚುನಾವಣಾ ಫಲಿತಾಂಶಗಳೊಂದಿಗೆ ಘೋಷಿಸಲಾಗುತ್ತದೆ.
ಗುಜರಾತ್ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆಯೊಂದಿಗೆ ಎರಡು ಪಕ್ಷಗಳ ರಾಜ್ಯವಾಗಿದೆ. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧೆಗೆ ಪ್ರವೇಶಿಸಿದ್ದ, ಎರಡೂ ಪಕ್ಷಗಳ ಬಲವನ್ನು ನಿಭಾಯಿಸಲು ಆಕ್ರಮಣಕಾರಿ ಪ್ರಚಾರವನ್ನು ನಡೆಸುತ್ತಿದೆ.