ಶಿವಮೊಗ್ಗ : ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸಹಾಯಧನವನ್ನು ಕಾಲಕಾಲಕ್ಕೆ ಪರಿಷ್ಕರಿಸುವ ಮಾರ್ಗಸೂಚಿ, ಅನುದಾನ ಲಬ್ಯತೆ ಹಾಗೂ ಜೇಷ್ಟತೆ ಅನುಸಾರವಾಗಿ ಒದಗಿಸಲಾಗುವುದು. ಅರ್ಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಶಿಕಾರಿಪುರದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 15ರೊಳಗಾಗಿ ಸಲ್ಲಿಸುವಂತೆ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.