ಬೆಂಗಳೂರು : ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಪ್ರಭಾವಿ ವ್ಯಕ್ತಿ, ರಾಜಕೀಯ ಮುಖಂಡರು, ಶ್ರೀಮಂತ ವ್ಯಕ್ತಿಗಳನ್ನು ಬ್ಲಾಕ್ ಮೇಲ್ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡುವ ಕೆಲಸವನ್ನು ಖತರ್ನಾಕ್ ಗ್ಯಾಂಗ್ ಗಳು ಮಾಡುತ್ತಿದೆ.
ಸದ್ಯ, ಬೆಂಗಳೂರಿನಲ್ಲಿ ಅಂತದ್ದೇ ಪ್ರಕರಣ ಬಯಲಿಗೆ ಬಂದಿದ್ದು, ಹನಿಟ್ರ್ಯಾಪ್ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದಾರೆ, ನಗರದ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯ ವ್ಯಕ್ತಿಯೊಬ್ಬರನ್ನು ಅಕ್ಟೋಬರ್ 30 ರಂದು ಟ್ರಾಪ್ ಮಾಡಿದ್ದರು, ತಮ್ಮ ಜಾಲಕ್ಕೆ ಬೀಳಿಸಿಕೊಂಡಿದ್ದರು. ನಂತರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ಎರಡು ಲಕ್ಷ ರೂ ಹಣಕ್ಕೆ ಬೇಡಿಕೆಯೊಡ್ಡಿದ್ದರು. ನಂತರದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಅನುರಾಧ ಅಲಿಯಾಸ್ ಅನು (28) ಎಂದು ಗುರುತಿಸಲಾಗಿದೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.