ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಹೌದು, ಗಂಧದ ಗುಡಿ ಸಿನಿಮಾದ ಟಿಕೆಟ್ ಬೆಲೆ ಇಳಿಕೆ ಮಾಡಲಾಗಿದೆ. ಈ ಬಗ್ಗೆ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು ಅದರಲ್ಲೂ ಮಕ್ಕಳು ನೋಡಬೇಕೆಂಬುದು, ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ ಗಂಧದಗುಡಿ ಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ ಏಕ ಪರದೆ(Single Screens) ಥೀಯೇಟರ್ ಗಳಲ್ಲಿ 756/- ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್ (Mulitiplex) ಗಳಲ್ಲಿ 112/- ರೂ ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ ಅಂತ ಅವರು ಬರೆದುಕೊಂಡು ಇದ್ದಾರೆ.