ಬೆಂಗಳೂರು : ಇಂದಿನಿಂದ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಪ್ರಾಯೋಗಿಕವಾಗಿ ಸಂಚಾರ ಆರಂಭಿಸಲಿದೆ.
ರೈಲಿನ ತಾಂತ್ರಿಕ ದೋಷಗಳನ್ನು ಪತ್ತೆ ಮಾಡಿ ಅಗತ್ಯ ಮಾರ್ಪಾಡು ಮಾಡಲು ಟ್ರಯಲ್ ರನ್ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 10.20 ಕ್ಕೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ಆಗಮಿಸಲಿದೆ. 10.30ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ ಮೈಸೂರು ತಲುಪಲಿದೆ. ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಮಧ್ಯಾಹ್ನ 2.55 ಆಗಮಿಸಲಿದ್ದು, 3.10 ಕ್ಕೆ ಚೆನ್ನೈನತ್ತ ಹೊರಡಲಿದೆ.
ನವೆಂಬರ್ 11 ರಂದು ಬೆಳಗ್ಗೆ 10.50 ಕಕ್ಎ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಈ ರೈಲಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.