ನವದೆಹಲಿ: ಹಿಂದುಳಿದ ವರ್ಗದವರಿಗೆ ( backward classes ) ಶಿಕ್ಷಣ ಮತ್ತು ಉದ್ಯೋಗದಲ್ಲಿ ಆರ್ಥಿಕವಾಗಿ ( EWS) ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತಂತೆ ಸಂವಿಧಾನದ 103ನೇ ತಿದ್ದುಪಡಿಯ ಸಾಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ನೀಂದ ( Supreme Court ) ಮಹತ್ವದ ತೀರ್ಪು ಇಂದು ಪ್ರಕಟವಾಗಲಿದೆ. ಹೀಗಾಗಿ ಎಲ್ಲರ ಚಿತ್ತ, ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನತ್ತ ನೆಟ್ಟಿದೆ.
BIGG NEWS : ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಡೀಸೆಲ್ ಸಬ್ಸಿಡಿ’ ಖಾತೆಗೆ ಜಮಾ
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 27ರಂದು ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಗಳ ವಿಚಾರಣೆ ನಡೆಸಿತ್ತು. ಈ ಬಳಿಕ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಹಿಂದುಳಿದ ವರ್ಗದವರಿಗೆ ಮೀಸಲು ಕಲ್ಪಿಸುವ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಸಂವಿಧಾನದ 103ನೇ ತಿದ್ದುಪಡಿಯನ್ನು ಅಸಿಂಧುಗೊಳಿಸಬೇಕೆಂದು ಒಂದು ವರ್ಗ ವಾದ ಮಾಡಿಸಿತ್ತು. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರವು ಶೇ.50:50ರ ಮೀಸಲಿಗೆ ಧಕ್ಕೆ ಬಾರದ ರೀತಿಯಲ್ಲಿ EWSಗೆ ಮೀಸಲು ಕಲ್ಪಿಸಲಾಗಿದೆ ಎಂಬುದಾಗಿ ಸಮರ್ಥಿಸಿಕೊಂಡಿತ್ತು.