ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕೇಸ್ ಪ್ರಕರಣದಲ್ಲಿ ಬಂಧನವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
BIGG NEWS : ಇಂದಿನಿಂದ ರಾಜ್ಯದ `ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಪ್ರಾಯೋಗಿಕ ಸಂಚಾರ
ಇದೀಗ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
BIGG NEWS : ಇಂದಿನಿಂದ ರಾಜ್ಯದ `ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಪ್ರಾಯೋಗಿಕ ಸಂಚಾರ
ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.