ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ( Social Welfare Department ) ಪ್ರತಿ ವರ್ಷ ಹಿಂದುಳಿದ ವರ್ಗ, ಎಸ್ಸಿ, ಎಸ್ಟಿ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯನ್ನು ( Free competitive exam training ) ನೀಡಲಾಗುತ್ತದೆ. ಈ ತರಬೇತಿಗಾಗಿ ಅರ್ಜಿ ಸಲ್ಲಿಸಿದ್ದವರನ್ನು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಕೂಡ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಅಕ್ಟೋಬರ್ 13, 2022ರಂದು ನಿಗದಿ ಪಡಿಸಲಾಗಿದೆ.
ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ವೇತನ ಆಯೋಗ ರಚನೆ’
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2022-23ನೇ ಸಾಲಿಗೆ ಯುಪಿಎಸ್ಸಿ, ಕೆಎಎಸ್, ಬ್ಯಾಂಕಿಂಗ್, ಗ್ರೂಪ್-ಸಿ, ಎಸ್ಎಸ್ ಸಿ, ಆರ್ ಆರ್ ಬಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆಯ್ಕೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ದಿನಾಂಕ 13-11-2022ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿರುವಂತ ಅಭ್ಯರ್ಥಿಗಳು ದಿನಾಂಕ 13-11-2022ರಂದು ನಡೆಯಲಿರುವಂತ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು http://kea.kar.nic.in ಜಾಲತಾಣದಲ್ಲಿ ಡೌನ್ ಲೋಡ್ ಮಾಡಿಕೊಳ್ಳುವುದು. ಪರೀಕ್ಷೆಯಂದು ನಿಗದಿತ ಸಮಯಕ್ಕೆ ಹಾಜರಾಗುವುದು ಎಂದು ಹೇಳಿದ್ದಾರೆ.
ಇನ್ನೂ ಪ್ರವೇಶ ಪರೀಕ್ಷೆಗಾಗಿ ಅಭ್ಯರ್ಥಿಗಳಿಗೆ ಇಲಾಖೆಯಿಂದ ಪತ್ರದ ಮೂಲಕ ಪ್ರವೇಶ ಪತ್ರ ವಿತರಣೆ ಮಾಡುವುದಿಲ್ಲ. ಯಾವುದೇ ಪತ್ರ ವ್ಯವಹಾರ ನಡೆಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ http://kea.kar.nic.in ಅಥವಾ www.sw.kar.nic.in ಗೆ ಭೇಟಿ ನೀಡಿ. ಇಲ್ಲವೇ 080-22207784 ಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಹೇಳಿದೆ.