ನವದೆಹಲಿ: ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಸಂವಿಧಾನದ 103 ನೇ ತಿದ್ದುಪಡಿ ಕಾಯ್ದೆ 2019 ರ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ.
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯೂಎಸ್) ಶೇ.10ರಷ್ಟು ಮೀಸಲಾತಿ ನೀಡುವ ವ್ಯವಸ್ಥೆಯ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ತನ್ನ ತೀರ್ಪನ್ನು ನೀಡಲಿದೆ. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ. ಇಡಬ್ಲ್ಯೂಎಸ್ ಕೋಟಾದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 27 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಇಡಬ್ಲ್ಯೂಎಸ್ ಕೋಟಾವು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆಯೇ ಎಂದು ನಿರ್ಧಾರಿಸಲಿದ್ದಾರೆ.