ಚಿತ್ರದುರ್ಗ : ಚಿತ್ರದುರ್ಗ ತಾಲೂಕಿನ ಚೆಕ್ಕಬೆನ್ನೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬೆನ್ನೂರು ಗ್ರಾಮದ ಬಳಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಮಹಾರಾಷ್ಟ್ರ ಮೂಲದ ಮಾನ್ವಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭರಮಸಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜ್ಞಾನವಾಪಿ ಆವರಣದಲ್ಲಿ ಪೂಜೆಗೆ ಸಂಬಂಧಿಸಿದಂತೆ ಇಂದು ವಾರಣಾಸಿ ಕೋರ್ಟ್ನಿಂದ ತೀರ್ಪು