ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್ ನಿಂದ ಹೊರಗೆ ಬುರತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
BIGG NEWS: ಕೊಪ್ಪಳದ ಹುಲಿಹೈದರ ಗುಂಪು ಘರ್ಷಣೆ ಬಳಿಕ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದ್ದಾರೆ.ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
BIGG NEWS: ಕೊಪ್ಪಳದ ಹುಲಿಹೈದರ ಗುಂಪು ಘರ್ಷಣೆ ಬಳಿಕ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನ ಸೇರುತ್ತಿಲ್ಲ. ಆದರೆ ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನಿಟ್ಟು ಬೀಗ ಹಾಕಿ ಕಟ್ಟಿಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.