ಧಾರವಾಡ : 2021-22ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ssp.karnataka.gov.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ
ವಿದ್ಯಾರ್ಥಿಗಳು Pre matric (I & X) scholarship For SC Students-Karnataka ಅಥವಾ Pre matric (I & X) scholarship For ST Students-Karnataka ಈ ಸ್ಕೀಂ ನಲ್ಲಿ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಬೇರೆ ಸ್ಕೀಂನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ, ಅಂತಹ ವಿದ್ಯಾರ್ಥಿಯ ಶಿಷ್ಯವೇತನ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವಾಗ ಯಾವುದೆ ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ಸಹಾಯವಾಣಿ: ಸಮಾಜ ಕಲ್ಯಾಣ ಇಲಾಖೆ: 080-22634300/9008400078, ಪರಿಶಿಷ್ಟ ವರ್ಗಗಳ ನಿರ್ದೇಶನಾಲಯ : 080-22261789 ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447201 ಸಂಪರ್ಕಿಸಬಹುದು.
ಆದ್ದರಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪ.ವರ್ಗದ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ತುಂಬಿದ ಅರ್ಜಿಯ ಪ್ರತಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರಿಗೆ ಹಾಗೂ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಯರಿಗೆ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.