ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ್ದ ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಇದನ್ನು ಕಾಂಗ್ರೆ ಪಕ್ಷ ತಳ್ಳಿಹಾಕುತ್ತದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ಈ ಕುರಿತಾಗಿ ಸ್ಪಷ್ಟೀಕರಣ ಪಡೆದುಕೊಳ್ಳುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ ಧರ್ಮದವನು. ನಮಗೆ ನಮ್ಮದೇ ಇತಿಹಾಸವಿದೆ. ಹಾಗಾಗಿ ಸತೀಶ್ ಹೇಳಿಕೆ ಅವರ ವೈಯಕ್ತಿಕ ವಿಚಾರ. ಅವರು ತಮ್ಮ ಮನೆಯಲ್ಲಿ ಮಾತನಾಡಿದ್ದರೆ ಏನೂ ಆಗುವುದಿಲ್ಲ. ಆದರೆ ಸಾರ್ವಜನಿಕ ಬದುಕಿನಲ್ಲಿ ಈ ತರಹ ಹೇಳಿಕೆ ನೀಡಬಾರದಿತ್ತು ಎಂದರು