ಬೆಂಗಳೂರು : ನ.15ರೊಳಗೆ ರಸ್ತೆ ಗುಂಡಿ ಮುಚ್ಚದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ರಸ್ತೆ ಗುಂಡಿಯಿಂದ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ವಿರುದ್ಧ ಜನರು, ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಹಿನ್ನೆಲೆ ಗುಂಡಿ ಮುಚ್ಚದ ಪಾಲಿಕೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು ರಸ್ತೆ ಗುಂಡಿ ಮುಚ್ಚಲು ಗಡುವು ನೀಡಿದ್ದರು.ಇದರಿಂದ ಎಚ್ಚೆತ್ತ ಬಿಬಿಎಂಪಿ ಆಯುಕ್ತರು ನ.15ರೊಳಗೆ ನಗರದ ರಸ್ತೆಗಳಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಪಾಲಕೆ ಎಂಜಿನಿಯರ್ಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿಂದೆ ನ. 10 ರೊಳಗೆ ಗುಂಡಿ ಮುಚ್ಚಲು ಗಡುವು ನೀಡಲಾಗಿತ್ತು.ಆದರೆ ಸಾಧ್ಯವಾಗಿರಲಿಲ್ಲ, ಇದೀಗ ಮತ್ತೆ ನ.15ರವರೆಗೆ ಗಡುವು ನೀಡಲಾಗಿದ, .ಗುಂಡಿ ಮುಚ್ಚುವ ಕಾಮಗಾರಿ ತ್ವರಿತಗೊಳಿಸುವಂತೆ ಎಲ್ಲ ಮುಖ್ಯ ಅಭಿಯಂತರರಿಗೆ ನೋಟಿಸ್ ನೀಡಲಾಗಿದೆ. ನ. 15ರೊಳಗೆ ರಸ್ತೆ ಗುಂಡಿ ಮುಚ್ಚಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಭಾರತೀಯರ ಬದುಕು ಕಸಿದ ‘ನೋಟ್ ಬ್ಯಾನ್’ನಿಂದಾದ ಲಾಭವೇನು ಬಿಜೆಪಿ?- ಕಾಂಗ್ರೆಸ್ ಪ್ರಶ್ನೆ