ಗದಗ : ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂಪಾಯಿ ನೀಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂಪಾಯಿ ನೀಡಲಾಗುತ್ತದೆ ಎಂದರು.
ಶಿರಹಟ್ಟಿಯಲ್ಲಿ ಕನಕದಾಸರ ಸಭಾಭವನ ನಿರ್ಮಾಣಕ್ಕೆ ಬೇಡಿಕೆ ಬಂದಿದೆ. ಇದಕ್ಕಾಗಿ ಒಂದು ಕೋಟಿ ರೂಪಾಯಿ ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಶಿರಹಟ್ಟಿ ಮುಂಡರಗಿ ಕ್ಷೇತ್ರವನ್ನು ಪ್ರವಾಸೋದ್ಯಮ ಸ್ಥಳವನ್ನಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು.. ತಾಂಡಾದ ಪ್ರತಿಯೊಂದು ಮನೆಗೂ ಹಕ್ಕುಪತ್ರಗಳನ್ನು ಒಂದು ತಿಂಗಳಿನಲ್ಲಿ ತಲುಪಿಸಲಾಗುವುದು. ಅವರ ಬೇಡಿಕೆಯನ್ನು ಈಡೇರಿಸುವುದು ಸರ್ಕಾರ ಬದ್ಧತೆಯಾಗಿದೆ. ಜನರು ಯಾವುದೇ ಆತಂಕ ಪಡುವುದು ಬೇಡ, ಸರ್ಕಾರ ಯಾವಾಗಲೂ ನಿಮ್ಮ ಜೊತೆ ಇರುತ್ತದೆ ಎಂದು ಬೊಮ್ಮಾಯಿ ಹೇಳಿದರು.
BREAKING NEWS : ಇಬ್ಬರು ಶಾಸಕರ ನಿವಾಸದ ಮೇಲೆ ಐಟಿ ದಾಳಿ ; 100 ಕೋಟಿ ಅಕ್ರಮ ಬಯಲು ; CBDT ಹೇಳಿಕೆ |IT Raid