ಬೆಂಗಳೂರು: ಲೋಹಿತಾಶ್ವ ಅವರ ನಿಧನಕ್ಕೆ ಕಂಬನಿ ಮಿಡಿದ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟರ್ನಲ್ಲಿ ಸಂತಾಪವನ್ನು ಸೂಚಿಸಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ಪ್ರಬುದ್ಧ ನಟನೆಯಿಂದ ಕನ್ನಡಿಗರ ಜನಮಾನಸದಲ್ಲಿ ಶಾಶ್ವತವಾಗಿ ಸ್ಥಾನ ಪಡೆದಿದ್ದ ಹಿರಿಯ ನಟ ಶ್ರೀ ಲೋಹಿತಾಶ್ವ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಅಂತ ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ.
ಇದೇ ವೇಳೆ ಡಿಕೆಶಿವಕುಮಾರ್ ಅವರು ಕೂಡ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಶ್ರೀ ಲೋಹಿತಾಶ್ವ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಅವರು ನಟಿಸಿರುವ ಸಿನಿಮಾಗಳು ಇನ್ನೂ ಕೂಡ ಕಣ್ಣಿಗೆ ಕಟ್ಟಿದಂತಿವೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರ ನೋವಿನಲ್ಲಿ ನಾನೂ ಕೂಡ ಭಾಗಿ ಅಂತ ಟ್ವಿಟ್ ಮಾಡಿ. ಸಚಿವ ಬಿಸಿ ಪಾಟೀಲ್ ಕೂಡ ಟ್ವಿಟ್ ಮಾಡಿದ್ದು ಅವರು ಚಂದನವನದ ಹಿರಿಯ ನಟ, ಭಿನ್ನ ವಿಭಿನ್ನ ಪಾತ್ರಗಳಿಂದ ಸಿನಿ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದ ಲೋಹಿತಾಶ್ವ ಅವರ ನಿಧನದ ಸುದ್ದಿ ತಿಳಿದು ದುಃಖವಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆ ದುಃಖವನ್ನು ಬರಿಸುವ ಶಕ್ತಿಯನ್ನು ಕುಟುಂಬ ವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಂತ ಹೇಳಿದ್ದಾರೆ.