ಚಾಮರಾಜನಗರ : ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 37 ಲಕ್ಷ ರೂಪಾಯಿ ಸಂಗ್ರಹವಾಗಿದೆ.
ಕಳೆದ 3 ತಿಂಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂಪಾಯಿ ಹಣ ಸಂಗ್ರಹವಾಗಿದೆ. 200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್ಗಳನ್ನೂ ಕೂಡ ಭಕ್ತರು ರಂಗನಾಥನಿಗೆ ಅರ್ಪಿಸಿದ್ದಾರೆ.
ಹಾಗೆಯೇ ದೇವಾಲಯದಲ್ಲಿ 1 ಬೆಳ್ಳಿ ಮುಖವಾಡ, 1ಪುಟಾಣಿ ಘಂಟೆ- ಆರತಿ, 2 ಬೆಳ್ಳಿ ಕೊಳಲು, 2 ದೇವರ ಮೂರ್ತಿಯನ್ನು ದೇವಾಲಯಕ್ಕೆ ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಬಿಳಿಗಿರಿರಂಗನ ಬೆಟ್ಟಮೈಸೂರಿನಿಂದ 120 ಕಿ.ಮೀಟರ್ ಹಾಗೂ ಬೆಂಗಳೂರಿನಿಂದ 240 ಕಿ.ಮೀಟರ್ ದೂರದಲ್ಲಿರುವ ಬಿಳಿಗಿರಿ ರಂಗನ ಬೆಟ್ಟ , ಸಮುದ್ರ ಮಟ್ಟದಿಂದ 1552 ಮೀಟರ್ ಎತ್ತರದಲ್ಲಿದೆ, ಚಾಮರಾಜನಗರ ಹಾಗೂ ಯಳಂದೂರು ಮಾರ್ಗವಾಗಿ ಸುಮಾರು 15 ಕಿ.ಮೀ. ದೂರದಲ್ಲಿರುವ ಶ್ರೀರಂಗನಾಥನ ನೆಲೆವೀಡು ಬಿಳಿಗಿರಿ ರಂಗನ ಬೆಟ್ಟ, ಪುರಾಣ ಪ್ರಸಿದ್ಧ ಸ್ಥಳ ಈ ಕ್ಷೇತ್ರಕ್ಕೆ ಬಿಳಿಗಿರಿ ಎಂದು ಹೆಸರು ಬರಲು ಬೆಟ್ಟದಲ್ಲಿ ಬಿಳಿಯ ಬಣ್ಣದ ಶಿಲೆಗಳಿರುವುದೇ ಕಾರಣ. ಈ ಬೆಟ್ಟವನ್ನು ಜನಪದರು ಬಿಳಿಕಲ್ಲು ಬೆಟ್ಟ ಎಂದರೆ, ಪಂಡಿತರು ಶ್ವೇತಾದ್ರಿ ಎಂದೂ ಕರೆದಿದ್ದಾರೆ. ಬ್ರಹ್ಮಾಂಡ ಪುರಾಣದಲ್ಲಿ ಈ ಬೆಟ್ಟವನ್ನು ದಕ್ಷಿಣ ತಿರುಪತಿ ಎಂದು ಉಲ್ಲೇಖಿಸಲಾಗಿದೆ. 5,091 ಅಡಿ ಎತ್ತರದ ನಿಸರ್ಗರಮಣೀಯವಾದ ಬೆಟ್ಟದಲ್ಲಿ ನವರಂಗ, ಮುಖಮಂಟಪದಿಂದ ಕೂಡಿದ ಬಿಳಿಗಿರಿರಂಗನ ಪುರಾತನ ದ್ರಾವಿಡಶೈಲಿಯ ದೇವಾಲಯವಿದೆ.
‘ಹಿಂದು’ ಅಶ್ಲೀಲ ಪದ ಹೇಳಿಕೆ ವಿವಾದ : ಸೋಶಿಯಲ್ ಮೀಡಿಯಾದಲ್ಲಿ’# I Stand wih Satish Jarakiholi’ ಅಭಿಯಾನ
ಹಿಂದೂಗಳನ್ನು ಅವಮಾನಿಸುವ ಹೇಳಿಕೆ ಸಹಿಸಲಸಾಧ್ಯ – ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ