ಮಂಗಳೂರು : ಗುರುಪುರ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರಕರಣ ವಿಚಾರಣೆಗೆ ಸಂಬಂಧಿಸಿದ ತೀರ್ಪುನ್ನು ಮಂಗಳೂರಿನ ನ್ಯಾಯಾಲಯ ಇಂದು ಪ್ರಕಟಿಸಲಿದೆ.
BREAKING NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ | Earthquake
ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.