ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದಾರೆ.
BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೋ ಪುಸ್ತಕ ನೋಡಿಕೊಂಡು ಹೇಳಿಕೆ ಕೊಡುವುದಲ್ಲ ಎಂದು ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ.
BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ನಗರದಲ್ಲಿ ಮಾತನಾಡಿದ ಅವರು, ವಿಕಿಪಿಡಿಯಾ ವಿಶ್ವಾಸಾರ್ಹತೆ ಎಷ್ಟಿದೆ ಅಂತ ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ವಿಕಿಪಿಡಿಯಾ ಮೇಲೆ ಸಾಕಷ್ಟು ಪ್ರಕರಣಗಳು ಮತ್ತು ಆರೋಪಿಗಳಿವೆ. ಆದರೆ ವಿಕಿಪಿಡಿಯಾ ಮುಖ್ಯಸ್ಥ ಈಗಾಗಲೇ ಅವರು ಜೈಲಿನಲ್ಲಿದ್ದು ಬಂದವನು. ಅಂಥವರ ವಿಚಾರ ನಂಬಿ ಪ್ರತಿಪಾದಿಸುತ್ತಾರೆ ಅಂದ್ರೆ ಏನ್ ಹೇಳಲಿ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.