ಮಂಗಳೂರು : ಮಂಗಳೂರಿನ ಮಳಲಿ ಮಸೀದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ಸ್ವೀಕರಿಸಿದೆ.
ಇಂದು ಮಳಲಿ ಮಸೀದಿ ವಿವಾದದ ಅರ್ಜಿ ಕುರಿತು ವಿಚಾರಣೆ ನಡೆಸಿದ ಮಂಗಳೂರು ನ್ಯಾಯಾಲಯ ವಿಹೆಚ್ ಪಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿದ್ದು, ಮುಸ್ಲಿಂ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ಮಳಲಿ ಮಸೀದಿ ವಿಚರಣೆ ನಡೆಯಲಿದೆ ಎಂದು ಮಂಗಳೂರಿನ 3 ನೇ ಹೆಚ್ಚುವರಿ ಕೋರ್ಟ್ ತಿಳಿಸಿದೆ.