ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಫೋಷಿಸಿದ್ದಾರೆ.
ಇನ್ನೂ ಎಂಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತಿರುವು ಪಡೆದುಕೊಂಡಿದೆ. ಇಂದು ರೇಣುಕಾಚಾರ್ಯ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಅವರು ಮಾತನಾಡಿದ ಅವರು, ಈ ರೀತಿ ಸಾವು ಆಗುತ್ತೆ ಎಂದು ಯಾರೂ ಭಾವಿಸಿರಲಿಲ್ಲ. ಇದರಿಂದ ರೇಣುಕಾಚಾರ್ಯ ಅವರಿಗೆ ಆಘಾತವಾಗಿದೆ. ಅವರು ಚಂದ್ರುನನ್ನು ಬಹಳ ಹಚ್ಚಿಕೊಂಡಿದ್ದರು. ರೇಣುಕಾಚಾರ್ಯ ನನ್ನ ಸಹೋದರ ಇದ್ದಂತೆ ಎಂದು ಹೇಳಿದ್ದಾರೆ. ಇದು ಹೇಗೆ ಆಯ್ತು ಅನ್ನೋದು ದೊಡ್ಡ ಯಕ್ಷ ಪ್ರಶ್ನೆ ಹುಟ್ಟಿಕೊಂಡಿದೆ ಎಂದರು.
ಚಂದ್ರು ಸಾವು ಸಮಗ್ರ ತನಿಖೆ ಸೂಚನೆ ನೀಡಿದ್ದೇನೆ. ಎಲ್ಲಾ ಆಯಾಮದಲ್ಲೂ ಸೂಕ್ತ ತನಿಖೆ ನಡೆಸುವಂತೆ ಹೇಳಿದ್ದೇನೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ. ಇನ್ನೆರೆಡು ದಿನಗಳಲ್ಲಿ ಮರಣೋತ್ತರ ಪರೀಕ್ಷೆ ಬರಲಿದೆ. ಒಂದೊಂದು ಅಂಶಗಳನ್ನು ತನಿಖೆಗೆ ಸೂಚನೆ ನೀಡಿದ್ದಾನೆ. ಚಂದ್ರಶೇಖರ್ ಸಾವಿಗೆ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.