ತುಮಕೂರು: `ಹಿಂದೂ’ ಪದದ ಅರ್ಥ ಅಶ್ಲೀಲ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
BIGG NEWS: ಸಿಲಿಕಾನ್ ಸಿಟಿಯಲ್ಲಿ ನಕಲಿ ದಾಖಲೆ ಪಡೆದು ಪಾಸ್ಪೋರ್ಟ್ ಮಾಡಿಸುತ್ತಿದ್ದ ಗ್ಯಾಂಗ್ ಅರೆಸ್ಟ್
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ. ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನ ಅವಮಾನ ಮಾಡುತ್ತಾ ಅಲ್ಪಸಂಖ್ಯಾತರ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ರು ಎಂದು ಕಿಡಿ ಕಾರಿದ್ದಾರೆ.
BIGG NEWS: ಸಿಲಿಕಾನ್ ಸಿಟಿಯಲ್ಲಿ ನಕಲಿ ದಾಖಲೆ ಪಡೆದು ಪಾಸ್ಪೋರ್ಟ್ ಮಾಡಿಸುತ್ತಿದ್ದ ಗ್ಯಾಂಗ್ ಅರೆಸ್ಟ್
ಈಗ ಇಡೀ ರಾಜ್ಯ ಮತ್ತು ದೇಶದ ಜನಕ್ಕೆ ಕಾಂಗ್ರೆಸ್ಸೇ ಒಂದು ಅಶ್ಲೀಲ ಅಂತ ಗೊತ್ತಾಗಿದೆ. ಹಾಗಾಗಿ ಜನ ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಾಗಲೇ ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಮುಂದೆಯೂ ಬೆಲೆ ತೆರುತ್ತಾರೆ. ಇನ್ನೂ 5 ತಿಂಗಳಲ್ಲಿ ಚುನಾವಣೆ ಇದೆ. ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ