ಬೆಂಗಳೂರು : ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯ ಹಿಂದೂ ಪದದ ಕೀಳು ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆದಿದೆ.
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲೂ ಕೂಡ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಸತೀಶ್ ಜಾರಕಿಹೊಳಿ ಬೇಷರತ್ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ನವರಿಗೆ ಏನಾದರೂ ಧಮ್ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಈರಣ್ಣ ಕಡಾಡಿ ಸವಾಲು ಹಾಕಿದ್ದಾರೆ.
ರಾಯಚೂರು ಜಿಲ್ಲೆಯಲ್ಲೂ ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ಅಂಬೇಡ್ಕರ್ ಸರ್ಕಲ್ ನಲ್ಲಿ ಕಾರ್ಯಕರ್ತರು ಸತೀಶ್ ಜಾರಕಿಹೊಳಿ ಭಾವಚಿತ್ರಕ್ಕೆ ಬೂಟು ಕಾಲಿಂದ ಒದ್ದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಜಾರಕಿಹೊಳಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
‘ಹಿಂದು’ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಸತೀಶ್ ಜಾರಕಿಹೊಳಿಗೆ ನಟ ಜಗ್ಗೇಶ್ ತಿರುಗೇಟು