ಬೆಂಗಳೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ( Gubbi MLA S R Srinivas ) ಅವರನ್ನು ನಮ್ಮ ಶಾಸಕರು ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಸ್ನೆಹಪೂರ್ವಕವಾಗಿ ಭೇಟಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಹೇಳಿದರು.
ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವು ಪ್ರಕರಣ: ಸಂಪೂರ್ಣ ತನಿಖೆಯಾಗುವವರೆಗೆ ತೀರ್ಮಾನಕ್ಕೆ ಬರಬಾರದು – ಸಿಎಂ ಬೊಮ್ಮಾಯಿ
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಇದು ಅವರ ವೈಯುಕ್ತಿಕವಾದ ಭೇಟಿ, ಈ ಮಾತನ್ನು ಅವರೇ ಹೇಳಿದ್ದಾರೆ. ನಾನೇನು ಮಧ್ಯಸ್ಥಿಕೆ ವಹಿಸಿ ಯಾವುದೇ ಸಂದೇಶ ಕಳುಹಿಸಿಲ್ಲ. ಈಗಾಗಲೇ ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ನಾಗರಾಜ್ ಈಗಾಗಲೇ ಪಕ್ಷದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸಾ.ರಾ.ಮಹೇಶ್ ಮತ್ತು ಅನ್ನದಾನಿ ಅವರು ಭೇಟಿ ಮಾಡಿರುವ ಬಗ್ಗೆ ಅಪಾರ್ಥ ಬೇಡ. ಅದರ ಬಗ್ಗೆ ಹೆಚ್ಚು ಚರ್ಚೆಯೂ ಅಗತ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
BIG NEWS: ನ.11ರಂದು ಕರ್ನಾಟಕಕ್ಕೆ ‘ಪ್ರಧಾನಿ ಮೋದಿ’ ಆಗಮನ: ಹೀಗಿದೆ ‘ಪಿಎಂ ಕಾರ್ಯಕ್ರಮ’ದ ಸಂಪೂರ್ಣ ಪಟ್ಟಿ
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಶಾಲೆಗಳಿಗೆ ‘ಪಠ್ಯಪುಸ್ತಕ’ ಪೂರೈಕೆ ಸಮಸ್ಯೆಯಾಗಿಲ್ಲ – ಶಿಕ್ಷಣ ಇಲಾಖೆಯ ಸ್ಪಷ್ಟನೆ