ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ( Central Election Commission ) ನಿರ್ದೇಶನದಂತೆ ಇಂದು ಬೆಂಗಳೂರು ಸೇರಿದಂತ ರಾಜ್ಯಾಧ್ಯಂತ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರು ವ್ಯಾಪ್ತಿಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು ( Draft voters’ list ) ಪ್ರಕಟಿಸಲಾಗಿದ್ದು, ನಿಮ್ಮ ಹೆಸರಿದ್ಯಾ ಅಂತ ಚೆಕ್ ಮಾಡಿಕೊಳ್ಳಬಹುದಾಗಿದೆ.
ಈ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಮತದಾರರ ಕರಡು ಪ್ರತಿಯನ್ನು ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಅವರ ವ್ಯಾಪ್ತಿಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು ತಂಗಿಯೂ ಆತ್ಮಹತ್ಯೆಗೆ ಶರಣು
ಇನ್ನೂ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದ ವೆಬ್ ಸೈಟ್ www.ceokarnataka.kar.nic.in ನಲ್ಲಿ ಅಥವಾ ಬಿಬಿಎಂಪಿಯ www.bbmp.gov.in ಜಾಲತಾಣದಲ್ಲಿಯೂ ನೋಡಬಹುದಾಗಿದೆ.