ನವದೆಹಲಿ : ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಪಾಕಿಸ್ತಾನ ಅಮೋಘ ಪ್ರದರ್ಶನ ನೀಡಿದ್ದು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2022ರ ವಿಶ್ವಕಪ್ನಲ್ಲಿ ಪಾಕಿಸ್ತಾನ ಫೈನಲ್ಗೆ ಪ್ರವೇಶ ಪಡೆದ ಸಾಧನೆ ಮಾಡಿದೆ.
ಒಂದು ಹಂತದಲ್ಲಿ ಟೂರ್ನಿಯಿಂದ ಲೀಗ್ ಹಂತದಿಂದಲೇ ಹೊರಬೀಳುವ ಆತಂಕದಲ್ಲಿದ್ದ ಪಾಕಿಸ್ತಾನ ಅದ್ಭುತ ರೀತಿಯಲ್ಲಿ ಕಮ್ಬ್ಯಾಕ್ ಮಾಡಿದ್ದು ಈಗ ಫೈನಲ್ ಹಂತಕ್ಕೇರಿ ಅಚ್ಚರಿ ಮೂಡಿಸಿದೆ.
ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಪಾಕಿಸ್ತಾನ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಮೂರು ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಸಾಧಾರಣ ಮೊತ್ತಕ್ಕೆ ನ್ಯೂಜಿಲೆಂಡ್ ತಂಡವನ್ನು ಕಟ್ಟಿ ಹಾಕಿದ ಪಾಕಿಸ್ತಾನ ತಂಡ ಬಳಿಕ ರನ್ ಬೆನ್ನಟ್ಟುವಾದ ಆರಂಭಿಕರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ ಪಾಕ್ ಪಡೆ ಭರ್ಜರಿಯಾಘಿ ರನ್ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್ ಆಡುವ ಬಳಗ : ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್ ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್