ಬೆಂಗಳೂರು : ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿಗೆ ಮಾಜಿ ಶಾಸಕ ಯು.ಬಿ ಬಣಕಾರ್ ( Farmer MLA U B Banakar ) ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ನಡೆಸಿದ್ದಾರೆ.
ಮಾಜಿ ಶಾಸಕ ಯು.ಬಿ ಬಣಕಾರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ( BJP Primary membership ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ, ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೂ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ರಾಜಕೀಯ ಬೆಳವಣಿಗೆಗೆ ಬೇಸತ್ತು ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಅಂದಹಾಗೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಅವರ ಆಪ್ತರಲ್ಲಿ ಒಬ್ಬರಾಗಿ ಯು ಬಿ ಬಣಕಾರ್ ಗುರುತಿಸಿಕೊಂಡಿದ್ದರು. ಇಂತಹ ಅವರು ಇದೀಗ ದಿಢೀರ್ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಹಿರೇಕೆರೂರು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚಿಗೆ ನಡೆದಂತ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿಯೂ ಭಾಗವಹಿಸಿದ್ದಂತ ಯುಬಿ ಬಣಕಾರ್ ಇಂದು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು ತಂಗಿಯೂ ಆತ್ಮಹತ್ಯೆಗೆ ಶರಣು