ಶೃಂಗೇರಿ : ಮಸೀದಿ ಮುಂಭಾಗ ಕಟ್ಟಿದ್ದ ಕೇಸರಿ ಬಾವುಟದ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಭೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಪಟ್ಟಣದ ವೆಲ್ ಕಮ್ ಗೇಟ್ ನಲ್ಲಿರುವ ಮಸೀದಿ ಮುಂಭಾಗ ಗಲಭೆ ನಡೆದಿದೆ . ವೆಲ್ ಕಮ್ ಗೇಟ್ ನಲ್ಲಿ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ಕಟ್ಟಲಾಗಿತ್ತು. ಈ ವಿಚಾರವಾಗಿ ಶ್ರೀರಾಮ ಸೇನೆ ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ.
ನಂತರ ಗಲಾಟೆ ವಿಕೋಪಕ್ಕೆ ಹೋಗಿದ್ದು, ಇಬ್ಬರು ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ, ಗಲಭೆಯಲ್ಲಿ ಗಾಯಗೊಂಡ ಇಬ್ಬರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಂತರ ಕೊಪ್ಪ ಎಎಸ್ ಪಿ ಗುಂಜನ್ ಆರ್ಯ ಶೃಂಗೇರಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ : ನ. 11 ರ ಮಧ್ಯರಾತ್ರಿವರೆಗೆ ‘ಮದ್ಯ’ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ
‘ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು’ : ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿಗೆ ಸಿಎಂ ಬೊಮ್ಮಾಯಿ ಟಾಂಗ್