ನವದೆಹಲಿ: ದೇಶದ ಈಶಾನ್ಯ ಭಾರತದಲ್ಲಿ ಭೂಕಂಪನದ ಕಂಪನದ ಅನುಭವವಾಗಿದೆ. ಈ ಭೂಕಂಪದ ಕೇಂದ್ರಬಿಂದು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ನಲ್ಲಿತ್ತು. ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಪ್ರಕಾರ, ಅರುಣಾಚಲದಲ್ಲಿ ಈ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.7 ರಷ್ಟು ಅಳೆಯಲಾಗಿದೆ ಎನ್ನಲಾಗಿದೆ.
ಈ ನಡುವೆ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಪ್ರಕಾರ, ಭೂಕಂಪದ ಕೇಂದ್ರಬಿಂದು ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿದೆ. ಬೆಳಿಗ್ಗೆ 10.31 ಕ್ಕೆ ಅದರ ಕಂಪನದ ಅನುಭವವಾಯಿತು. ಭೂಕಂಪನವು ರಿಕ್ಟರ್ ಮಾಪಕದಲ್ಲಿ 5.7 ಆಗಿತ್ತು. ಈ ಭೂಕಂಪದ ಕೇಂದ್ರಬಿಂದುವು 10 ಕಿಲೋಮೀಟರ್ ಆಳದಲ್ಲಿತ್ತು.