ಮಾಲೆ: ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ವಿದೇಶಿ ಕಾರ್ಮಿಕರ ಇಕ್ಕಟ್ಟಾದ ವಸತಿಗೃಹಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಸೇವೆ ತಿಳಿಸಿದೆ. ಬೆಂಕಿ ಅವಘಡದಲ್ಲಿ 9 ಭಾರತೀಯರು ಮೃತಪಟ್ಟಿದ್ದು, ಕಟ್ಟಡವೊಂದರ ಮೇಲಿನ ಮಹಡಿಯಿಂದ 10 ಮೃತದೇಹಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ನೆಲಮಹಡಿ ವಾಹನ ರಿಪೇರಿ ಗ್ಯಾರೇಜ್ ನಿಂದ ಬೆಂಕಿ ಕಾಣಿಸಿಕೊಂಡಿದೆ. “ನಾವು 10 ಶವಗಳನ್ನು ಕಂಡುಕೊಂಡಿದ್ದೇವೆ” ಎಂದು ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬೆಂಕಿಯನ್ನು ನಂದಿಸಲು ಅವರಿಗೆ ಸುಮಾರು ನಾಲ್ಕು ಗಂಟೆಗಳು ಬೇಕಾಯಿತು ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಬೆಂಕಿಯಲ್ಲಿ ಮೃತಪಟ್ಟ ಇನ್ನೊಬ್ಬ ವ್ಯಕ್ತಿ ಬಾಂಗ್ಲಾದೇಶದ ಪ್ರಜೆ ಎಂದು ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ.