ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬರುವ ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ. ಈ ವಿಷಯವನ್ನು ಪರಿಶೀಲಿಸಲು ನ್ಯಾಯಪೀಠವನ್ನು ಸಹ ರಚಿಸಲಾಗುವುದು ಅಂಥ ತಿಳಿಸಿದೆ. ಸುಪ್ರೀಂ ಕೋರ್ಟ್ ನಾಳೆ ಮಧ್ಯಾಹ್ನ 3 ಗಂಟೆಗೆ ಶಿವಲಿಂಗದ ರಕ್ಷಣೆಯ ವಿಷಯವನ್ನು ನಿಗದಿಪಡಿಸಿದೆ. ಮಸೀದಿಯ ಒಳಗೆ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸಂರಕ್ಷಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲಿ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ನಿರ್ದೇಶನ ನೀಡಿತ್ತು.
ಇದರೊಂದಿಗೆ, ಇದು ನಮಾಜ್ ಮಾಡುವ ಮುಸ್ಲಿಮರ ಹಕ್ಕಿನ ಮೇಲೆ ಪರಿಣಾಮ ಬೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಜ್ಞಾನವಾಪಿ ಮಸೀದಿಯ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿರುವ ಅರ್ಜಿಯ ಬಗ್ಗೆ ನಿರ್ಧರಿಸುವಂತೆ ವಾರಣಾಸಿ ಜಿಲ್ಲಾ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಪ್ರಾರ್ಥನಾ ಸ್ಥಳಗಳು (ವಿಶೇಷ ನಿಬಂಧನೆಗಳು) ಕಾಯ್ದೆಯಡಿ ಜ್ಞಾನ್ವಾಪಿ ಪ್ರಕರಣವನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ಸಮಿತಿ ಹೇಳಿತ್ತು.