ಬೆಂಗಳೂರು : ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಬಗ್ಗೆ ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ ಆದೇಶ ಹೊರಡಿಸಿದ್ದು, 2022-23 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 25000 ರೂ ಪ್ರೋತ್ಸಾಹಧನ ನೀಡಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು 10:12:2022 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕು ಅಲ್ಪಸಂಖ್ಯಾತ ಕಲ್ಯಾಣ ನಿಗಮವನ್ನು ಸಂಪರ್ಕಿಸಬಹುದಾಗಿದೆ.
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಆದೇಶ ಮಾಡಿದ್ದು ನಾಚಿಕೆಗೇಡಿನ ವಿಚಾರವಲ್ಲವೇ? – DKS ಪ್ರಶ್ನೆ