ಮೈಸೂರು : ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ SI ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ ಪರೀಕ್ಷೆ ನಡೆಸುವುದಿಲ್ಲ.. ಈಗಾಗಲೇ ಎಲ್ಲಾ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತಿವೆ. ವರದಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದುವರೆಗೆ ಶೇ.35ರಷ್ಟು ಪೊಲೀಸ್ ಹುದ್ದೆಗಳು ಖಾಲಿ ಇರುತ್ತಿತ್ತು. ಇದೀಗ 12 ಸಾವಿರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು.
BREAKING NEWS: ಹಿಂದೂಗಳ ಭಾವನೆಗಳಿಗೆ ಧಕ್ಕೆ, ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಹಾಸ್ಯನಟ ವೀರ್ ದಾಸ್ ಶೋರದ್ದು