ಚಿತ್ರದುರ್ಗ: ಮುರುಘಾ ಮಠದಲ್ಲಿ ( Murugha Matt ) 47 ಪೋಟೋಗಳು ಕಳವು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಆರೋಪಿಗಳು ನೀಡಿದಂತ ಮಾಹಿತಿ ಆಧರಿಸಿ, ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ( SK Basavarajan ) ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ಬಳಿಕ ಅವರನ್ನು ಬಂಧಿಸಿದ್ದರು. ಇದೀಗ ಅವರಿಗೆ ಕೋರ್ಟ್ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ( Karnataka Police custody ) ನೀಡಿ ಆದೇಶಿಸಿದೆ.
ಮುರುಘಾ ಮಠದ ಶ್ರೀಗಳು ಪೋಕ್ಸೋ ಕೇಸ್ ನಲ್ಲಿ ಜೈಲು ಪಾಲಾದ ಬಳಿಕ, ಮಠದಲ್ಲಿದ್ದಂತ 47 ಪೋಟೋಗಳು ಕಳವಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಂತ ಚಿತ್ರದುರ್ಗ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಪೋಟೋ ಕಳವಿಗೆ ಪ್ರಚೋದಿಸಿದ್ದೇ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಎಂಬ ಸ್ಪೋಟಕ ವಿಷಯ ಹೊರ ಬಂದಿತ್ತು.
BREAKING NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಬಂಧಿತ ಆರೋಪಿ ಅಮೃತ್ ಪೌಲ್ ನಿವಾಸದ ಮೇಲೆ ಇಡಿ ದಾಳಿ
ಈ ಮಾಹಿತಿ ತಿಳಿದ ಬೆನ್ನಲ್ಲೇ ಪೊಲೀಸರು ಎಸ್ ಕೆ ಬಸವರಾಜನ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಹಲವು ಮಹತ್ವದ ವಸ್ತುಗಳನ್ನು ಸಂಗ್ರಹಿಸಿದ್ದರು. ಬಳಿಕ ಪೋಟೋ ಕಳವು ಪ್ರಕರಣ ಸಂಬಂಧ ಎಸ್ ಕೆ ಬಸವರಾಜನ್ ಬಂಧಿಸಲಾಗಿತ್ತು. ಇಂದು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ, ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.
BREAKING: ಮಾಜಿ ಸಿಎಂ ಸಿದ್ಧರಾಮಯ್ಯ ಕ್ಷಮೆಯಾಚಿಸಿದ ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ
ಮುರುಘಾ ಮಠದಲ್ಲಿ ಪೋಟೋ ಕಳವು ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರ ಮುಂದೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿಕೊಂಡಿದ್ದರು. ಹೀಗಾಗಿ ನ್ಯಾಯಾಯಾಲಯವು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.