ಮೈಸೂರು : ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಹೆಬ್ಬಾಳು ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ. ಈಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ ಎಂದರು, ಇದುವರೆಗೆ ಶೇ.35ರಷ್ಟು ಪೊಲೀಸ್ ಹುದ್ದೆಗಳು ಖಾಲಿ ಇರುತ್ತಿತ್ತು. ಇದೀಗ 12 ಸಾವಿರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು.
ಬಿಜೆಪಿ ಸರ್ಕಾರ ಬರುವ ಮುನ್ನ ಪೊಲೀಸ್ ಇಲಾಖೆಯಲ್ಲಿ 35 ಸಾವಿರ ಹುದ್ದೆಗಳು ಖಾಲಿಯಿತ್ತು, ಪ್ರತಿ ವರ್ಷ ಸಾವಿರಾರು ಖಾಲಿ ಹುದ್ದೆ ಭರ್ತಿ ಮಾಡುವ ಮೂಲಕ ಇಲಾಖೆಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ SI ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ ಪರೀಕ್ಷೆ ನಡೆಸುವುದಿಲ್ಲ.. ಈಗಾಗಲೇ ಎಲ್ಲಾ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತಿವೆ. ವರದಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
BREAKING NEWS : ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಹುದ್ದೆಯಿಂದ ರಾಜ್ಯಪಾಲ ‘ಆರಿಫ್ ಖಾನ್’ ವಜಾಗೊಳಿಸಿದ ಕೇರಳ ಸರ್ಕಾರ
‘ಮುರುಘಾ ಶ್ರೀ’ಗಳ ಪೋಕ್ಸೋ ಪ್ರಕರಣ : ಬೆಚ್ಚಿ ಬೀಳಿಸುವ ಮಾಹಿತಿ ಬಿಚ್ಚಿಟ್ಟ ಅಡುಗೆ ಭಟ್ಟ, ಆಫೀಸ್ ಬಾಯ್ |Murgha Sri